ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಸಾದ್ ಭಾಗವತರು ಯಕ್ಷಕಲಾಭಿಮಾನಿಗಳ ನೆಚ್ಚಿನ ಭಾಗವತರಾಗಿದ್ದರು. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬಲಿಪ ಪ್ರಸಾದ್ ಭಾಗವತ ವಿಧಿವಶ.#balipa #yakshagana #ಯಕ್ಷಗಾನ pic.twitter.com/t5NzbJKRo0
— theruralmirror (@ruralmirror) April 11, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel