ಭಾಗವತ ಪ್ರಸಾದ್‌ ಬಲಿಪ ವಿಧಿವಶ |

April 11, 2022
8:02 PM

ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಕಲಾಸೇವೆಯಲ್ಲಿ  ತೊಡಗಿಸಿಕೊಂಡಿದ್ದ ಪ್ರಸಾದ್‌ ಭಾಗವತರು ಯಕ್ಷಕಲಾಭಿಮಾನಿಗಳ ನೆಚ್ಚಿನ ಭಾಗವತರಾಗಿದ್ದರು. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror