ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ.
ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕೆಲವು ವರ್ಗಗಳ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವ ಕುರಿತಂತೆ ವಿನಾಯಿತಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ. 65 ಕೋಟಿ ರೂಪಾಯಿ ಮೊತ್ತದ 25 ಎಕರೆ ಜಮೀನು ಖರೀದಿಸಲು ಸಂಪುಟ ನಿರ್ಧರಿಸಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ವಾರದ ಮೂರು ದಿನದ ಬದಲು ಐದು ದಿನಕ್ಕೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ

