ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

April 20, 2026
8:08 AM
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ಕಾವೇರಿ ನದಿ ತೀರಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ತಹಸೀಲ್ದಾರ್ ಚೇತನಾ ಯಾದವ್ ಆದೇಶ ಹೊರಡಿಸಿದ್ದಾರೆ. ಹೆಚ್ಚುತ್ತಿರುವ ಮುಳುಗು ಪ್ರಕರಣಗಳ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಜನಪ್ರಿಯ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ಪ್ರದೇಶಗಳು ಇತ್ತೀಚೆಗೆ ಅಪಾಯಕಾರಿ ವಲಯಗಳಾಗಿ ಪರಿಣಮಿಸುತ್ತಿವೆ. ಪ್ರವಾಸಿಗರು ನದಿಗೆ ಇಳಿದು ಈಜಲು ಹೋಗುವ ಸಂದರ್ಭಗಳಲ್ಲಿ ಮುಳುಗಿ ಸಾವನ್ನಪ್ಪುವ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಆಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಚೇತನಾ ಯಾದವ್ ಅವರು ಬಲಮುರಿ, ಎಡಮುರಿ ಸೇರಿದಂತೆ ಕಾರೇಕುರ ಗ್ರಾಮದ ಕಾವೇರಿ ನದಿ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಆದೇಶವು ಸುರಕ್ಷತಾ ದೃಷ್ಟಿಯಿಂದ ಹೊರಡಿಸಲ್ಪಟ್ಟಿದ್ದು, ಸಾರ್ವಜನಿಕರ ಜೀವ ರಕ್ಷಣೆ ಮುಖ್ಯ ಉದ್ದೇಶವಾಗಿದೆ.

ಇದೇ ವೇಳೆ, ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್. ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಈ ನದಿ ಪ್ರದೇಶಗಳಲ್ಲಿ ಮುಂದಿನ ಆದೇಶ ಬರುವವರೆಗೆ ನಿಷೇಧ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯೂ ನೀಡಲಾಗಿದೆ.

ಸ್ಥಳೀಯರು ಮತ್ತು ಪ್ರವಾಸಿಗರು ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಲಾಗಿದೆ. ವಿಶೇಷವಾಗಿ ಬೇಸಿಗೆ ಕಾಲದಲ್ಲಿ ನದಿ ಪ್ರವಾಹದ ದೃಷ್ಠಿಯಿಂದ ಅಪಾಯ ಹೆಚ್ಚಿರುವುದರಿಂದ ಜಾಗ್ರತೆ ಅಗತ್ಯವಾಗಿದೆ.

Tourist entry has been banned at Balmuri and Edmuri along the Cauvery river in Srirangapatna taluk of Mandya district due to increasing drowning incidents. The restriction will remain in force until further orders to ensure public safety.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror