ಧಾರ್ಮಿಕ

ಸೆ. 26 | ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವ

Share

ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Advertisement
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

3 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

3 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

10 hours ago