MIRROR FOCUS

ದೇಶದಾದ್ಯಂತ ಪಟಾಕಿ ಖರೀದಿ-ಮಾರಾಟ ನಿಷೇಧ | ದೀಪಾವಳಿಗೂ ಮುನ್ನ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

Share

ದೀಪಾವಳಿ(Deepavali) ಬೆಳಕಿನ ಹಬ್ಬ. ಹಣತೆ, ದೀಪದಲಂಕಾರ, ಸಿಹಿ ತಿಂಡಿ ಜೊತೆಗೆ ಪಟಾಕಿ ಇದ್ರೆನೇ ಹಬ್ಬಕ್ಕೊಂದು ಕಳೆ. ಆದರೆ ಪಟಾಕಿ ಅಂದ್ರೆ ಅದು ಪರಿಸರ ಮಾಲಿನ್ಯ(Environmental pollution) ಮಾಡುವ ವಸ್ತು. ಶಬ್ದ, ಅದರಿಂದ ಬಿಡುಗಡೆಯಾಗುವ ರಾಸಾಯನಿಕ(Chemical) ಎಲ್ಲವೂ ನಮ್ಮ ಪರಿಸರವನ್ನು ಹಾಳು ಮಾಡುತ್ತದೆ. ಹಾಗಾಗಿ ಪಟಾಕಿಯನ್ನು ನಿಷೇಧಿಸಬೇಕು ಅನ್ನೋದು ಪರಿಸರವಾದಿಗಳ ಬಹಳ ದಶಕಗಳ ಕೂಗು. ಅದರಂತೆ ದೀಪಾವಳಿ  ಮತ್ತು ಇತರ ಸಂದರ್ಭಗಳಲ್ಲಿ ಬೇರಿಯಂ ರಾಸಾಯನಿಕ ಒಳಗೊಂಡ ಪಟಾಕಿ (Fire Crackers Ban) ಸಿಡಿಸದಂತೆ ತನ್ನ ಆದೇಶಗಳನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್(Supreme court)  ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.ಹಸಿರು ಪಟಾಕಿ ಸಿಡಿಸುವುದಕ್ಕೆ ಯಾವುದೇ ಅಡ್ಡಿ ಇಲ್ಲ.

Advertisement

ಈ ತೀರ್ಪು ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯ ಎಂದು ತಿಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ಪಟಾಕಿ ಸಿಡಿಸುವ ಕುರಿತು ಹಿಂದಿನ ಆದೇಶಗಳನ್ನು ಜಾರಿಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ರಾಜಸ್ಥಾನ ರಾಜ್ಯದ ಅರ್ಜಿಗಳನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ. ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳಿರುವ ಪಟಾಕಿ ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ರಾಜಸ್ಥಾನದ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿ, ಈ ತೀರ್ಪು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದೆ.

ಇಡೀ ದೇಶಕ್ಕೆ ಅನ್ವಯ: ಪಟಾಕಿ ನಿಷೇಧಿಸುವ ನಮ್ಮ ಆದೇಶ ಇಡೀ ದೇಶಕ್ಕೆ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು, ” ನಮ್ಮ ಹಿಂದಿನ ಆದೇಶದಲ್ಲಿ, ನಾವು ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವ ವಿಷಯವನ್ನು ಸ್ಥಳೀಯ ಸರ್ಕಾರಕ್ಕೆ ಬಿಟ್ಟಿದ್ದೇವೆ. ಅಲ್ಲದೆ ಆಸ್ಪತ್ರೆಗಳಂತಹ ಆರೋಗ್ಯ ಸೂಕ್ಷ್ಮ ಸ್ಥಳಗಳಲ್ಲಿ ಪಟಾಕಿ ಸಿಡಿಸದಂತೆ ಹಾಗೂ ಪಟಾಕಿ ಸಿಡಿಸಲು ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕೋರಲಾಗಿದೆ. ಎನ್‌ಸಿಆರ್‌ಗೆ ಒಳಪಡುವ ರಾಜಸ್ಥಾನದ ಪ್ರದೇಶಗಳಿಗೂ ದೆಹಲಿ-ಎನ್‌ಸಿಆರ್ ನಿಯಮಗಳು ಅನ್ವಯಿಸುತ್ತವೆ. ಅಂದರೆ ಅಲ್ಲಿಯೂ ಪಟಾಕಿ ಸಿಡಿಸುವುದಕ್ಕೆ ನಿಷೇಧವಿದೆ ಎಂದು ನ್ಯಾಯಾಲಯ ಹೇಳಿದೆ.

ಬೆಳೆ ತ್ಯಾಜ್ಯ ಸುಡುವುದಕ್ಕೆ ನಿಷೇಧ: ಇದೇ ಸಂದರ್ಭದಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯವನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಪ್ರತಿನಿಧಿಗಳು ಬುಧವಾರ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮಾಲಿನ್ಯ ತಡೆಯುವುದು ಎಲ್ಲರ ಕರ್ತವ್ಯ : ಮಾಲಿನ್ಯ ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ. ಪಂಜಾಬ್‌ನಲ್ಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಕೊಳೆಗಳನ್ನು ಸುಡುವಂತಹ ವಿವಿಧ ಕಾರಣಗಳಿಂದ ಮಾಲಿನ್ಯದ ಮಟ್ಟವು ಹೆಚ್ಚುತ್ತಿದೆ ಎಂದು ಗಮನಿಸಿದ ನ್ಯಾಯಾಲಯ, ಮಾಲಿನ್ಯವನ್ನು ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಸರ್ಕಾರವು ಅತ್ಯುನ್ನತ ಹೊಣೆಗಾರಿಕೆಯನ್ನು ಹೊಂದಿದೆ ಎಂದು ತಿಳಿಸಿತು. ಗೋಧಿ ಹುಲ್ಲು ಸುಡುವುದನ್ನು ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿದೆ. ನಾವು ಇದನ್ನು (ಹುಲ್ಲು ಸುಡುವುದು) ನಿಲ್ಲಿಸಬೇಕೆಂದು ಬಯಸುತ್ತೇವೆ. ನೀವು ಅದನ್ನು ಹೇಗೆ ಮಾಡುತ್ತೀರಿ ಎಂದು ನಮಗೆ ತಿಳಿದಿಲ್ಲ, ಇದು ನಿಮ್ಮ ಕೆಲಸ. ಆದರೆ ಅದನ್ನು ನಿಲ್ಲಿಸಬೇಕು. ತಕ್ಷಣ ಏನಾದರೂ ಮಾಡಿ ಎಂದು ಆದೇಶ ಹೊರಡಿಸಿದೆ.‌

The Supreme Court on Tuesday directed all states and Union Territories to comply with its orders not to burst fire crackers containing barium chemical during Deepavali and other occasions. 
This judgment is applicable not only to Delhi but to the entire country. A bench comprising Justices AS Bopanna and MM Sundaresh passed the order after hearing the pleas of the state of Rajasthan seeking a direction to implement earlier orders on bursting of firecrackers.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

8 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

9 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

9 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

16 hours ago