ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |

March 27, 2024
10:01 PM
ಬರಗಾಲದ ಛಾಯೆ ಹೆಚ್ಚಾಗುತ್ತಿದೆ. ಈ ನಡುವೆ ನದಿ ನೀರನ್ನು ಕೃಷಿ ಬಳಕೆಗೆ ಉಪಯೋಗಿಸದಂತೆ ಮೈಸೂರಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror