ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…