Advertisement
MIRROR FOCUS

ಗಣೇಶ ಚತುರ್ಥಿ | ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ

Share

ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್  ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ /ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಾರ್ವಜನಿಕರು ಕೆಳಕಂಡ ಕ್ರಮಗಳನ್ನು ಅನುಸರಿಸಲಾಗುವುದು.

  1. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು.
  2. ಪ್ಲಾಸ್ಟರ್ ಆಫ್ ಪ್ಯಾರಿಸ್ ,ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ ,ಕಾಲುವೆ , ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ನ್ಯಾಯ ಸಂಹಿತೆ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.
  3. ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.
  4. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ,ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.
  5. ನೈಸರ್ಗಿಕ , ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮವಹಿಸಬೇಕು.
  6. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸಬೇಕು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು.
  7. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಠ ಜಲಮೂಲಗಳನ್ನು ನಿಗಧಿಪಡಿಸಬೇಕು.
  8. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ಧಿಗೆ ತೆಗೆದುಕೊಳ್ಳಲು ಕ್ರಮವಹಿಸಬೇಕು. ಈ ಅಧಿಸೂಚನೆಯನ್ನು ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ದೃಷ್ಟಿಯಿಂದ ಆದೇಶಿಸಲಾಗಿದ್ದು 2025 ನೇ ವರ್ಷದ ಗಣೇಶ ಚರ್ತುಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಹಕರಿಸಲು  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

7 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

13 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

23 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

1 day ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

1 day ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

3 days ago