Advertisement
Categories: Uncategorized

ದಿ ಕೇರಳ ಸ್ಟೋರಿ’ ನಿಷೇಧ: ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚಿತ್ರತಂಡ

Share

ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

12 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago