ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

February 11, 2025
6:50 AM

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ  ತಿಳಿಸಿದ್ದಾರೆ. ……… ಮುಂದೆ ಓದಿ…….

Advertisement

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ, ಬಾಳೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಆಯೋಜಿಸಲಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಪ್ರಮುಖವಾಗಿ ಏಲಕ್ಕಿ ಬಾಳೆ ಮತ್ತು ಪಚ್ಚ ಬಾಳೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಸಾವಿರ ಹೇಕ್ಟೇರಿಗಿಂತ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಸೂಕ್ಷ್ಮ ನೀರಾವರಿ ಘಟಕಗಳನ್ನು ಉಪಯೋಗಿಸುವುದರಿಂದ ನೀರಿನ ಮಿತ ಬಳಕೆ ಮತ್ತು ಗೊಬ್ಬರದ ಉಳಿತಾಯ, ನೀರು ಹಾಯಿಸಲು  ಕೂಲಿ ಕಾರ್ಮಿಕರ ಉಳಿತಾಯ, ಕಳೆಗಳ ನಿಯಂತ್ರಣ, ವಿದ್ಯುತ್ ಶಕ್ತಿ ಉಳಿತಾಯ ಹಾಗೂ ಕೊಳವೆಬಾವಿ ಮತ್ತು ತೆರೆದ ಬಾವಿಗಳಲ್ಲಿನ ನೀರಿನ ಸದ್ಬಳಕೆ ಮತ್ತು ಅವುಗಳ ಬಳಕೆಯ ಅವಧಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದರು.  ನಮ್ಮ ಕರ್ನಾಟಕ ರಾಜ್ಯವು ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಅಳವಡಿಸಿದ ರಾಜ್ಯವಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ರೈತರು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ತುಂತುರು ನೀರಾವರಿ ಘಟಕಗಳನ್ನು ಪಡೆಯಬಹುದಾಗಿದೆ. ಒಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿಗೆ ಸಹಾಯಧನ ಪಡೆದ ಸಾಮಾನ್ಯ ವರ್ಗದ ರೈತರಿಗೆ ಮತ್ತೊಮ್ಮೆ ಸಹಾಯಧನ ಪಡೆಯಲು ಅವಕಾಶವಿರುವುದಿಲ್ಲ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಪ್ರತಿ ಏಳು ವರ್ಷಕ್ಕೊಮ್ಮೆ ಸೂಕ್ಷ್ಮ ನೀರಾವರಿ ಘಟಕಗಳನ್ನು ಸಹಾಯಧನದಲ್ಲಿ ನೀಡಲು ಅವಕಾಶವಿರುತ್ತದೆಂದರು.ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೋರಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group