ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದ್ದಾರೆ. ……… ಮುಂದೆ ಓದಿ…….
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ, ಬಾಳೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಆಯೋಜಿಸಲಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಮುಖವಾಗಿ ಏಲಕ್ಕಿ ಬಾಳೆ ಮತ್ತು ಪಚ್ಚ ಬಾಳೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಸಾವಿರ ಹೇಕ್ಟೇರಿಗಿಂತ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಸೂಕ್ಷ್ಮ ನೀರಾವರಿ ಘಟಕಗಳನ್ನು ಉಪಯೋಗಿಸುವುದರಿಂದ ನೀರಿನ ಮಿತ ಬಳಕೆ ಮತ್ತು ಗೊಬ್ಬರದ ಉಳಿತಾಯ, ನೀರು ಹಾಯಿಸಲು ಕೂಲಿ ಕಾರ್ಮಿಕರ ಉಳಿತಾಯ, ಕಳೆಗಳ ನಿಯಂತ್ರಣ, ವಿದ್ಯುತ್ ಶಕ್ತಿ ಉಳಿತಾಯ ಹಾಗೂ ಕೊಳವೆಬಾವಿ ಮತ್ತು ತೆರೆದ ಬಾವಿಗಳಲ್ಲಿನ ನೀರಿನ ಸದ್ಬಳಕೆ ಮತ್ತು ಅವುಗಳ ಬಳಕೆಯ ಅವಧಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದರು. ನಮ್ಮ ಕರ್ನಾಟಕ ರಾಜ್ಯವು ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಅಳವಡಿಸಿದ ರಾಜ್ಯವಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ರೈತರು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ತುಂತುರು ನೀರಾವರಿ ಘಟಕಗಳನ್ನು ಪಡೆಯಬಹುದಾಗಿದೆ. ಒಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿಗೆ ಸಹಾಯಧನ ಪಡೆದ ಸಾಮಾನ್ಯ ವರ್ಗದ ರೈತರಿಗೆ ಮತ್ತೊಮ್ಮೆ ಸಹಾಯಧನ ಪಡೆಯಲು ಅವಕಾಶವಿರುವುದಿಲ್ಲ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಪ್ರತಿ ಏಳು ವರ್ಷಕ್ಕೊಮ್ಮೆ ಸೂಕ್ಷ್ಮ ನೀರಾವರಿ ಘಟಕಗಳನ್ನು ಸಹಾಯಧನದಲ್ಲಿ ನೀಡಲು ಅವಕಾಶವಿರುತ್ತದೆಂದರು.ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೋರಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…