MIRROR FOCUS

ರೈತನ ಜಮೀನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!? | ಕಟಾವಿಗೆ ಬಂದ ಬಾಳೆ ಸರ್ವನಾಶ | ದಯವಿಟ್ಟು ಹೀಗೆ ಮಾಡಬೇಡಿ |

Share

ಕಟಾವಿಗೆ ಬಂದ ಬೆಳೆ ಸರ್ವನಾಶವಾದರೆ ರೈತನ ಕರುಳು ಕಿತ್ತು ಬರುವುದು ಅಷ್ಟೇ ಅಲ್ಲ, ಈ ಹೊಲ ನೋಡಿದ ಯಾರಿಗೂ ವಿಷಾದ ಮೂಡದೇ ಇರದು. ಅಂತಹದ್ದೊಂದು ಘಟನೆ ಶಿರಾ ತಾಲೂಕಿನ ಹುಲಿಕುಂಟೆಯ ಬಳಿ  ನಡೆದಿದೆ.

Advertisement

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬಡಮಾರಲಹಳ್ಳಿ ಗ್ರಾಮದ ಗೊಣಿಹಳ್ಳಿ ಗ್ರಾಮದ ನಾಗೇಂದ್ರ ಎಂಬ ರೈತ ಜಮೀನಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಡೀ ತೋಟಕ್ಕೆ ಬೆಂಕಿ ಆವರಿಸಿ ನಷ್ಟ ಸಂಭವಿಸಿದೆ. ಸುಮಾರು 4 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದ ಬಾಳೆ ತೋಟ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿರುವುದು ಉದ್ದೇಶಪೂರ್ವಕವೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಟಾವಿಗೆ ಬಂದ ತೋಟಕ್ಕೆ ಬೆಂಕಿ ತಗುಲಿ ಇಡೀ ಬೆಳೆ ನಷ್ಟ ಸಂಭವಿಸಿದೆ. ರೈತನಿಗೆ ಅಪಾರ ನಷ್ಟ ಸಂಭವಿಸಿದೆ.ತೋಟಗಾರಿಕೆ ಇಲಾಖೆ ಆದಷ್ಟು ಬೇಗ ಕ್ರಮ ಕೈಗೊಂಡು ಈ ರೈತರಿಗೆ ಆಗಿರುವ ನಷ್ಟವನ್ನು ತುಂಬುದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿರಾ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.

Fire broke out in the banana plantation of a farmer named Nagendra of Gonihalli village of Badamaralahalli village of Hulikunte Hobali in Shira taluk. As a result, the entire plantation was engulfed in fire and banana cultivation was lost.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

5 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

5 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

15 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

16 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

16 hours ago