#BengaluruBandh | ಶಕ್ತಿ ಯೋಜನೆ ಜಾರಿ ವಿರೋಧಿಸಿ ಬಂದ್‌ | ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಮಾಲೀಕರಿಗೆ ತೊಂದರೆ |

September 11, 2023
12:03 PM
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಬಡವರಿಗೆ ಸಹಾಯವಾದರೆ ಇನ್ನು ಕೆಲವರ ಪಾಲಿಗೆ ಇದು ಕಂಟಕವಾಗಿದೆ. ಅದರಲ್ಲೂ ಉಚಿತ ಬಸ್‌ ಪ್ರಯಾಣ ಯೋಜನೆ, ಅಟೋ, ಟ್ಯಾಕ್ಸಿ ನಂಬಿ ಜೀವನ ನಡೆಸುವವರ ಜೀವನಕ್ಕೆ ಕುತ್ತು ಬಂದಿದೆ. ಶಕ್ತಿ ಯೋಜನೆ (Shakti Scheme) ಜಾರಿಯಾದ  ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿ ಬೆಂಗಳೂರು ಬಂದ್‌ ಗೆ ಕರೆ ನೀಡಿದ್ದರು.

Advertisement
Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿತ್ತು. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯಲಿಲ್ಲ.

Advertisement

ಪ್ರಮುಖ ಬೇಡಿಕೆಗಳೇನು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?
May 19, 2024
5:28 PM
by: The Rural Mirror ಸುದ್ದಿಜಾಲ
ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?
May 19, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror