ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಬಡವರಿಗೆ ಸಹಾಯವಾದರೆ ಇನ್ನು ಕೆಲವರ ಪಾಲಿಗೆ ಇದು ಕಂಟಕವಾಗಿದೆ. ಅದರಲ್ಲೂ ಉಚಿತ ಬಸ್ ಪ್ರಯಾಣ ಯೋಜನೆ, ಅಟೋ, ಟ್ಯಾಕ್ಸಿ ನಂಬಿ ಜೀವನ ನಡೆಸುವವರ ಜೀವನಕ್ಕೆ ಕುತ್ತು ಬಂದಿದೆ. ಶಕ್ತಿ ಯೋಜನೆ (Shakti Scheme) ಜಾರಿಯಾದ ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿತ್ತು. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯಲಿಲ್ಲ.
ಪ್ರಮುಖ ಬೇಡಿಕೆಗಳೇನು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…