ವಿಶ್ವದ ಗಮನ ಸೆಳೆಯುವ ಮಹತ್ವದ ಬೆಳವಣಿಗೆಯಲ್ಲಿ, Bandipur National Parkನಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹುಲಿ ಮೈತ್ರಿ (Global Tiger Alliance) ಶೃಂಗಸಭೆ ನಡೆಯುತ್ತಿದೆ. 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಶೃಂಗಸಭೆ ದೇಶದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮವಾಗಿದೆ.
ಉದ್ಘಾಟನಾ ಕಾರ್ಯಕ್ರಮವು ಮೇಲುಕಾಮನಹಳ್ಳಿಯಲ್ಲಿ ಮಧ್ಯಾಹ್ನ ನಡೆಯಲಿದೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಪ್ರಭಾಕರನ್ ತಿಳಿಸಿದ್ದಾರೆ.
ಶೃಂಗಸಭೆಯಲ್ಲಿ ರಷ್ಯಾ, ಶ್ರೀಲಂಕಾ, ಕಾಂಗೋ, ಭೂತಾನ್, ಮಲೇಷ್ಯಾ, ಕಾಂಬೋಡಿಯಾ, ಕಜಕಿಸ್ತಾನ್, ಮೆಕ್ಸಿಕೋ, ಮಂಗೋಲಿಯಾ ಸೇರಿದಂತೆ ಒಟ್ಟು 23 ರಾಷ್ಟ್ರಗಳ ಅರಣ್ಯ ಇಲಾಖೆ ಅಧಿಕಾರಿಗಳು, ವನ್ಯಜೀವಿ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ.
ಪ್ರಮುಖ ಚರ್ಚೆಗಳು ಏನು? : ಹುಲಿ ಸಂರಕ್ಷಣೆಯಲ್ಲಿ ಜಾಗತಿಕ ಸಹಕಾರ, ಅಕ್ರಮ ಬೇಟೆ ವಿರುದ್ಧ ಕಠಿಣ ಕ್ರಮಗಳು, ಮಾನವ–ವನ್ಯಜೀವಿ ಸಂಘರ್ಷ ಪರಿಹಾರ, ಹವಾಮಾನ ಬದಲಾವಣೆಯ ಪರಿಣಾಮ, ಸಂಶೋಧನಾ ಮಾಹಿತಿಗಳ ಹಂಚಿಕೆ ನಡೆಯಲಿದೆ.
ಬಂಡೀಪುರವು ನೀಲ್ ಗಿರಿ ಜೈವವೈವಿಧ್ಯ ವಲಯದ ಪ್ರಮುಖ ಭಾಗವಾಗಿದ್ದು, ಭಾರತದಲ್ಲಿ ಹುಲಿ ಸಂರಕ್ಷಣೆಯ ಮಾದರಿಯಾಗಿದೆ. ಈ ಶೃಂಗಸಭೆ ಮೂಲಕ ಹೊಸ ಕಾರ್ಯಯೋಜನೆ ರೂಪುಗೊಳ್ಳುವ ನಿರೀಕ್ಷೆಯಿದೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…