ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

February 20, 2026
7:10 AM
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ ನೀಡಲಾಗಿದ್ದು, ಸಮಯ ಕಡಿತ, 50% ವಾಹನಗಳಿಗೆ ಮಾತ್ರ ಅವಕಾಶ ಹಾಗೂ GPS ಮತ್ತು ಡ್ಯಾಶ್ ಕ್ಯಾಮ್ ಕಡ್ಡಾಯ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬಂಡಿಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಅರಣ್ಯ, ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹುಲಿ ದಾಳಿಯಿಂದ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಿಂದ ಈ ಪ್ರದೇಶಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ಘಟನೆಗಳ ಪರಿಣಾಮಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಾಂತ್ರಿಕ ಸಮಿತಿ ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದಲ್ಲಿ ಸಫಾರಿ ಪುನರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಪ್ರಥಮ ಹಂತದಲ್ಲಿ ಬಂಡಿಪುರದಲ್ಲಿ ದಿನಕ್ಕೆ 8 ಗಂಟೆಗಳ ಬದಲಾಗಿ 5 ಗಂಟೆ, ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆ ಪ್ರದೇಶದಲ್ಲಿ 4 ಗಂಟೆಗಳ ಕಾಲ ಮಾತ್ರ ಸಫಾರಿಗೆ ಅನುಮತಿ ನೀಡಲಾಗಿದೆ. ಜೊತೆಗೆ, ಹಿಂದಿನಂತೆ ಸಂಪೂರ್ಣ ವಾಹನಗಳಿಗೆ ಅವಕಾಶ ನೀಡದೇ, ಕೇವಲ ಶೇಕಡ 50ರಷ್ಟು ಸಫಾರಿ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಂದಿನ ಎರಡು ತಿಂಗಳ ಒಳಗಾಗಿ ಸಫಾರಿ ವಾಹನಗಳಿಗೆ ಇಂಜಿನ್ ಸಂಪರ್ಕಿತ GPS ವ್ಯವಸ್ಥೆ ಹಾಗೂ ಡ್ಯಾಶ್ ಕ್ಯಾಮ್ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಇದರಿಂದ ವಾಹನಗಳ ಚಲನವಲನವನ್ನು ನಿಗಾ ವಹಿಸಿ ಸುರಕ್ಷತೆ ಹೆಚ್ಚಿಸುವ ಉದ್ದೇಶವಿದೆ.

Advertisement

ಸ್ಥಳೀಯ ರೈತರು ಹಾಗೂ ಜನರ ಒತ್ತಾಯದ ಮೇರೆಗೆ ಸಫಾರಿ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ. ಸಫಾರಿ ಚಟುವಟಿಕೆಗಳ ಕಾರಣದಿಂದ ಹುಲಿಗಳು ಕಾಡಿನಿಂದ ನಾಡಿಗೆ ಬರುತ್ತಿವೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಅರಣ್ಯ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿ ಬದಲಾವಣೆಗಳೊಂದಿಗೆ ಸಫಾರಿಯನ್ನು ಪುನರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Safari operations in Bandipur and Nagarhole tiger reserves have been permitted to restart with restrictions, including reduced safari hours, only 50% vehicle usage, and mandatory GPS and dash cams. Forest Minister Eshwar Khandre said the decision was based on expert committee recommendations following earlier tiger attack incidents.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror