ಬೆಂಗಳೂರಿನಲ್ಲಿ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಹೆಲಿಕಾಪ್ಟರ್‌ ಸೇವೆ…! |

September 30, 2022
2:59 PM

ವಿದೇಶದಿಂದ ಬೆಂಗಳೂರಿಗೆ ಎರಡು ಗಂಟೆಯಲ್ಲಿ ತಲುಪಬಹುದು, ಆದರೆ ವಿಮಾನ ನಿಲ್ದಾಣದಿಂದ ಬೆಂಗಳೂರು ಮುಖ್ಯ ಕಚೇರಿಗಳಿಗೆ ತಲುಪಲು ಟ್ರಾಫಿಕ್‌ ಸಮಸ್ಯೆಯ ಕಾರಣದಿಂದ ಎರಡು ಗಂಟೆ ಸಾಲದು ಎಂಬ ಮಾತಿದೆ. ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಯುತ್ತಿದೆ.

ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ ಪೋರ್ಟ್ ನಿಂದ ಊರಿಗೆ ತೆರಳಲು ಒಮ್ಮೊಮ್ಮೆ ವಿಮಾನ ಪ್ರಯಾಣದಷ್ಟೇ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ  ಇತರೆ ನಗರಗಳಿಗೆ ಬೆಂಗಳೂರಿನಿಂದ ತೆರಳುವವರು ಟ್ರಾಫಿಕ್ ನಲ್ಲಿ ಸಿಲುಕಿ ತಮ್ಮ ಪ್ರಯಾಣ ತಪ್ಪಿಸಿಕೊಂಡ ಘಟನೆಗಳೂ ನಡೆದಿವೆ.  ಇಂತಹ ಸಮಸ್ಯೆಗೆ ಪರಿಹಾರ ನೀಡಲು ಬ್ಲೇಡ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಸಿದ್ದು, ಅಕ್ಟೋಬರ್ 10 ರಿಂದ ಇದು ಆರಂಭಗೊಳ್ಳಲಿದೆ. ಈ ಸೇವೆ ಆರಂಭವಾದ ಬಳಿಕ ಕೇವಲ 12 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಐದು ಆಸನ ಸಾಮರ್ಥ್ಯದ ಎಚ್ 125 ಡಿವಿಜಿ ಏರ್ ಬಸ್ ಹೆಲಿಕಾಪ್ಟರ್ ಅನ್ನು ಈ ಸೇವೆಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಒಬ್ಬರಿಗೆ 3,250 ರೂಪಾಯಿ ಪ್ರಯಾಣ ದರ ನಿಗದಿಪಡಿಸಲಾಗಿದೆ. ವಾರದ ಐದು ದಿನ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಈ ಹೆಲಿಕ್ಯಾಪ್ಟರ್ ಸೇವೆ ಲಭ್ಯವಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8-30ಕ್ಕೆ ಎಚ್‌ಎಎಲ್ ಗೆ ಹಾಗೂ 9-00ಕ್ಕೆ ಎಚ್‌ಎಎಲ್ ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇವೆ ಇರಲಿದೆ.ಅದೇ ರೀತಿ ಸಂಜೆ 4-15ಕ್ಕೆ ಎಚ್‌ಎಎಲ್ ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, 4-45ಕ್ಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‌ಎಲ್ ಗೆ ಸೇವೆ ಲಭ್ಯವಿರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror