ವಿದೇಶದಿಂದ ಬೆಂಗಳೂರಿಗೆ ಎರಡು ಗಂಟೆಯಲ್ಲಿ ತಲುಪಬಹುದು, ಆದರೆ ವಿಮಾನ ನಿಲ್ದಾಣದಿಂದ ಬೆಂಗಳೂರು ಮುಖ್ಯ ಕಚೇರಿಗಳಿಗೆ ತಲುಪಲು ಟ್ರಾಫಿಕ್ ಸಮಸ್ಯೆಯ ಕಾರಣದಿಂದ ಎರಡು ಗಂಟೆ ಸಾಲದು ಎಂಬ ಮಾತಿದೆ. ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಯುತ್ತಿದೆ.
ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ ಪೋರ್ಟ್ ನಿಂದ ಊರಿಗೆ ತೆರಳಲು ಒಮ್ಮೊಮ್ಮೆ ವಿಮಾನ ಪ್ರಯಾಣದಷ್ಟೇ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ ಇತರೆ ನಗರಗಳಿಗೆ ಬೆಂಗಳೂರಿನಿಂದ ತೆರಳುವವರು ಟ್ರಾಫಿಕ್ ನಲ್ಲಿ ಸಿಲುಕಿ ತಮ್ಮ ಪ್ರಯಾಣ ತಪ್ಪಿಸಿಕೊಂಡ ಘಟನೆಗಳೂ ನಡೆದಿವೆ. ಇಂತಹ ಸಮಸ್ಯೆಗೆ ಪರಿಹಾರ ನೀಡಲು ಬ್ಲೇಡ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಸಿದ್ದು, ಅಕ್ಟೋಬರ್ 10 ರಿಂದ ಇದು ಆರಂಭಗೊಳ್ಳಲಿದೆ. ಈ ಸೇವೆ ಆರಂಭವಾದ ಬಳಿಕ ಕೇವಲ 12 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.
ಐದು ಆಸನ ಸಾಮರ್ಥ್ಯದ ಎಚ್ 125 ಡಿವಿಜಿ ಏರ್ ಬಸ್ ಹೆಲಿಕಾಪ್ಟರ್ ಅನ್ನು ಈ ಸೇವೆಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಒಬ್ಬರಿಗೆ 3,250 ರೂಪಾಯಿ ಪ್ರಯಾಣ ದರ ನಿಗದಿಪಡಿಸಲಾಗಿದೆ. ವಾರದ ಐದು ದಿನ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಈ ಹೆಲಿಕ್ಯಾಪ್ಟರ್ ಸೇವೆ ಲಭ್ಯವಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8-30ಕ್ಕೆ ಎಚ್‌ಎಎಲ್ ಗೆ ಹಾಗೂ 9-00ಕ್ಕೆ ಎಚ್‌ಎಎಲ್ ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇವೆ ಇರಲಿದೆ.ಅದೇ ರೀತಿ ಸಂಜೆ 4-15ಕ್ಕೆ ಎಚ್‌ಎಎಲ್ ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, 4-45ಕ್ಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‌ಎಲ್ ಗೆ ಸೇವೆ ಲಭ್ಯವಿರಲಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…