ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

April 18, 2025
6:23 AM

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ.

ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ.   ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು, ಇದರಲ್ಲಿ ಫಸ್ಟ್ ಕ್ಲಾಸ್ ಎಸಿ (1), ಎಸಿ 2-ಟೈರ್ (2), ಎಸಿ 3-ಟೈರ್ (4), ಸ್ಲೀಪರ್ ಕ್ಲಾಸ್ (7), ಜನರಲ್ ಸೆಕೆಂಡ್ ಕ್ಲಾಸ್ (4), ಲಗೇಜ್/ಜನರೇಟರ್ ಕಾರ್‌ಗಳು (2). ಇರಲಿವೆ. ಈ ಹಿಂದೆ 22 ಬೋಗಿಗಳನ್ನು ಹೊಂದಿದ್ದ ಐಸಿಎಫ್ ರೇಕ್‌ನ ಬದಲಿಗೆ ಈಗ 20 ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror