ಹಾಲು ಉತ್ಪಾದನೆ ಹೆಚ್ಚಳ | ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ಹಾಲಿನ ಪ್ರೋತ್ಸಾಹ ಧನ ಕಡಿತ

June 2, 2023
10:48 AM

ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.

ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror