ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.
ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…