ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

May 20, 2025
9:44 PM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ನಗರ, ಕೊಪ್ಪ, ಕಳಸ, ಚಾರ್ಮಾಡಿ, ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು ವಾಹನ ಸವಾರರಿಗೆ ಸಮಸ್ಯೆ ಎದುರಾಗಿದೆ. ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ  ಹಿನ್ನೆಲೆಯಲ್ಲಿ ಜಿಲ್ಲೆಗೆ ನಾಳೆ ರೆಡ್ ಅರ್ಟ್ ಹಾಗು ನಾಡಿದ್ದು ಯೆಲ್ಲೋ ಅರ್ಟ್ ಘೊಷಣೆ ಮಾಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಕುಮಟಾ ಸೇರಿದಂತೆ ಕರಾವಳಿ ಭಾಗಗಳಲ್ಲಿ ಕಳೆದ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್  ಘೋಷಿಸಲಾಗಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಉತ್ತರಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತೆರೆದಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಸಮುದ್ರತೀರಕ್ಕೆ ಹೋಗದಂತೆ ಸೂಚಿಸಲಾಗಿದೆ.    ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ನಿರ್ದೇಶ ನೀಡಿದೆ.

ಕರಾವಳಿ ಕರ್ನಾಟಕದ ಕೆಲವೆಡೆ ಹಾಗೂ ಒಳನಾಡಿನ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ.  ಕಾರ್ಕಳದಲ್ಲಿ 15, ಯಲ್ಲಾಪುರದಲ್ಲಿ 13, ಮಂಗಳೂರು ವಿಮಾನ ನಿಲ್ದಾಣದಲ್ಲಿ 12 ಸೆಂಟಿಮೀಟರ್ ಮಳೆಯಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಯ ಹಲವೆಡೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.  ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮುಂದಿನ 24ಗಂಟೆಗಳಲ್ಲಿ ಸಾಧಾರಣದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಮಳೆ ಮುಂದುವರೆದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.  ಕಳೆದ ರಾತ್ರಿಯಿಡೀ ಧಾರಾಕಾರ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ನೀರು ನಿಂತಿದೆ. ಕೆಲವೆಡೆ ಮರಗಳು ಉರುಳಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.  ಮಳೆಯಲ್ಲಿ ವಾಹನ ಚಾಲನೆ ಮಾಡುವಾಗ ವೇಗ ಕಡಿಮೆಮಾಡುವಂತೆ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಸೂಚಿಸಿದ್ದಾರೆ. ವಾಹನ ಸವಾರರು ಆದಷ್ಟು ನೀರು ನಿಲ್ಲುವ ಪ್ರದೇಶವನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.  ಮೇ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಹ ಪೀಡಿತ ಪ್ರದೇಶಗಳ ನಗರ ಪ್ರದಕ್ಷಿಣೆ ನಡೆಸಲಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group