ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಇಂದಿನಿಂದ ಅ.24 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 22 ರವರೆಗೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇದೇ 23 ರವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲೂ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿ ಅಧಿಕಾರಿಗಳು ಟ್ರ್ಯಾಕ್ಟರ್ ಮೂಲಕ ಸಂತ್ರಸ್ತ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತೀ ಮಗುವಿಗೂ ಚೆಸ್ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್ ತರಬೇತಿ…
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…