ಬಿಎಂಟಿಸಿ ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರಕ್ಕೆ ಒತ್ತಾಯ

October 25, 2022
3:42 PM

ಬಿಎಂಟಿಸಿ(BMTC) ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್‍ನಲ್ಲಿ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಎಂಬವರ ಮೇಲೆ ಬಿಎಂಟಿಸಿ ಬಸ್ ಹರಿದು ತೀವ್ರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಶಿಲ್ಪಾ ಅವರ ಮೇಲೆ ಬಸ್ ಹರಿದಾಗಲೇ ರೊಚ್ಚಿಗೆದ್ದಿದ್ದ ವಿವಿ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನ ಸಂಚಾರ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಶಿಲ್ಪಾ ಮೃತಪಟ್ಟಿರುವುದರಿಂದ ಮತ್ತೆ ಕೆರಳಿರುವ ವಿದ್ಯಾರ್ಥಿಗಳು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾತ್ರವಲ್ಲದೆ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror