ಬಿಎಂಟಿಸಿ(BMTC) ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್‍ನಲ್ಲಿ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಎಂಬವರ ಮೇಲೆ ಬಿಎಂಟಿಸಿ ಬಸ್ ಹರಿದು ತೀವ್ರವಾಗಿ ಗಾಯಗೊಂಡಿದ್ದರು.
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಶಿಲ್ಪಾ ಅವರ ಮೇಲೆ ಬಸ್ ಹರಿದಾಗಲೇ ರೊಚ್ಚಿಗೆದ್ದಿದ್ದ ವಿವಿ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನ ಸಂಚಾರ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಶಿಲ್ಪಾ ಮೃತಪಟ್ಟಿರುವುದರಿಂದ ಮತ್ತೆ ಕೆರಳಿರುವ ವಿದ್ಯಾರ್ಥಿಗಳು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾತ್ರವಲ್ಲದೆ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.