Advertisement
ಸುದ್ದಿಗಳು

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಪ್ರಚಾರ | ತ್ರಿಪುರಾದಲ್ಲಿ 6 ಬಾಂಗ್ಲಾದೇಶಿಗರ ಬಂಧನ

Share

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ನಾಗರಿಕರನ್ನು ಪೊಲೀಸರು ಬಂಧಿಸಿರುವ ಘಟನೆ ತ್ರಿಪುರಾದಲ್ಲಿ ಬೆಳಕಿಗೆ ಬಂದಿದೆ.

ಭಾರತೀಯ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ, ದೆಹಲಿ ಹಾಗೂ ತಮಿಳುನಾಡು ಪೊಲೀಸರ ಸಹಯೋಗದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ತ್ರಿಪುರಾದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ನಾಗರಿಕರನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ.

ಬಂಧಿತರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇವರ ಚಟುವಟಿಕೆಗಳ ಮೇಲೆ ಭಾರತೀಯ ಗುಪ್ತಚರ ಇಲಾಖೆ ಕೆಲಕಾಲದಿಂದ ಕಣ್ಣಿಟ್ಟಿತ್ತು.

ಖಚಿತ ಮಾಹಿತಿಯ ಆಧಾರದಲ್ಲಿ ದೆಹಲಿಯ ಕ್ಯೂ ಬ್ರಾಂಚ್ ಪೊಲೀಸರು ತ್ರಿಪುರಾಗೆ ತೆರಳಿ ಕಾರ್ಯಾಚರಣೆ ನಡೆಸಿದ್ದು, ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಲವು ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಸ್ತುತ ಬಂಧಿತರಿಂದ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಇವರ ಸಂಪರ್ಕ ಜಾಲ ಹಾಗೂ ಭಾರತದಲ್ಲಿ ನಡೆಸುತ್ತಿದ್ದ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Six Bangladeshi nationals were arrested in Tripura during a joint operation by Delhi and Tamil Nadu Police for allegedly spreading terror propaganda on social media. Acting on intelligence inputs, authorities tracked their activities and seized important documents and digital evidence. Further investigation is underway to uncover their network and links.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago