ನವೆಂಬರ್ 19 (ನಾಳೆ) ರಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು (ಎಐಬಿಇಎ) ಮುಷ್ಕರ ನಡೆಸುತ್ತಿದ್ದು, ಇದರಿಂದ ರಾಷ್ಟ್ರದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಬ್ಯಾಂಕ್ ನೌಕರರ ಸಂಘದಲ್ಲಿ ಸಕ್ರಿಯರಾಗಿದ್ದಕ್ಕಾಗಿ ಬ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ಬಲಿಪಶು ಮಾಡುವುದು ಹಾಗೂ ಉದ್ಯೋಗ ಹೊರಗುತ್ತಿಗೆಯನ್ನು ವಿರೋಧಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.
ಬ್ಯಾಂಕ್ ಗಳ ಖಾಸಗೀಕರಣದ ವಿರುದ್ಧ ಮತ್ತು ಬ್ಯಾಂಕ್ ನೌಕರರ ಸುರಕ್ಷತೆ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದೆ. ಅಲ್ಲದೆ ಹಲವಾರು ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆಗೆ ನೀಡುತ್ತಿವೆ. ಇದರಿಂದ ಗ್ರಾಹಕರ ಖಾಸಗಿತನ ಮತ್ತು ಹಣ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ದೂರಿದೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಹಾಗೂ ಐಡಿಬಿಐ ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಒಕ್ಕೂಟ ಹೇಳಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…