ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

September 28, 2026
6:44 AM
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯ ಬೇಡಿಕೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಇಂದು ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ

ಸೆಪ್ಟೆಂಬರ್ 28ರಿಂದ 30 ರವರೆಗೆ ದೇಶಾದ್ಯಂತ ನಡೆಯಬೇಕಿದ್ದ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಹೀಗಾಗಿ ಇಂದು ಸೆಪ್ಟೆಂಬರ್ 28ರಂದು ದೇಶಾದ್ಯಂತ ಬ್ಯಾಂಕ್‌ ಶಾಖೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಗ್ರಾಹಕರಿಗೆ ಸಾಮಾನ್ಯ ಬ್ಯಾಂಕಿಂಗ್ ಸೇವೆಗಳು ಲಭ್ಯವಿರಲಿವೆ.

Advertisement

ವಾರದ ಎಲ್ಲಾ ಶನಿವಾರಗಳನ್ನು ಬ್ಯಾಂಕ್‌ಗಳಿಗೆ ರಜೆಯನ್ನಾಗಿ ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಸೆ.28ರಿಂದ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿತ್ತು.

ಆದರೆ ಭಾನುವಾರ ತಡರಾತ್ರಿ ಭಾರತೀಯ ಬ್ಯಾಂಕುಗಳ ಸಂಘ ಮತ್ತು ಬ್ಯಾಂಕ್‌ ಒಕ್ಕೂಟಗಳ ನಡುವೆ ನಡೆದ ಸಭೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಾರದ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರುವ ಬೇಡಿಕೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲು ಬ್ಯಾಂಕ್‌ ಒಕ್ಕೂಟಗಳು ನಿರ್ಧರಿಸಿವೆ.

ಈ ಸಮಿತಿಯು ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಕುರಿತು ಪರ್ಯಾಯಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಎಲ್ಲ ಪಾಲುದಾರರೊಂದಿಗೆ ಚರ್ಚೆ ನಡೆಸಲಿದೆ. ಗ್ರಾಹಕರಿಗೂ ಸ್ವೀಕಾರಾರ್ಹವಾದ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಇದರೊಂದಿಗೆ ಸ್ಕೇಲ್-4 ಹಾಗೂ ಅದಕ್ಕಿಂತ ಮೇಲಿನ ಅಧಿಕಾರಿಗಳಿಗೆ ಸಂಬಂಧಿಸಿದ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಯೋಜನೆ ಬದಲಾವಣೆ ಸೇರಿದಂತೆ ಇತರ ವಿಚಾರಗಳ ಕುರಿತೂ ಮಾತುಕತೆ ಮುಂದುವರಿಸಲು ಉಭಯ ಪಕ್ಷಗಳು ಒಪ್ಪಿಕೊಂಡಿವೆ.

ಗ್ರಾಹಕರಿಗೆ ದೊಡ್ಡ ರಿಲೀಫ್ : ಮುಷ್ಕರ ಮುಂದೂಡಿಕೆಯಿಂದ ಇಂದು ಬ್ಯಾಂಕ್‌ ಶಾಖೆಗಳಲ್ಲಿ ಚೆಕ್ ಕ್ಲಿಯರೆನ್ಸ್, ನಗದು ವಹಿವಾಟು, ಠೇವಣಿ ಸೇರಿದಂತೆ ಸಾಮಾನ್ಯ ಭೌತಿಕ ಬ್ಯಾಂಕಿಂಗ್ ಸೇವೆಗಳು ಲಭ್ಯವಿರಲಿವೆ. ಮುಷ್ಕರದಿಂದಾಗಿ ಬ್ಯಾಂಕ್‌ ಸೇವೆ ಸ್ಥಗಿತವಾಗಲಿದೆ ಎಂಬ ಆತಂಕದಲ್ಲಿದ್ದ ಗ್ರಾಹಕರಿಗೆ ಈ ಬೆಳವಣಿಗೆ ನಿರಾಳತೆ ತಂದಿದೆ.

ಹಿನ್ನೆಲೆ ಏನಿತ್ತು? : ಸೆ.28ರಿಂದ 30ರವರೆಗೆ ಮುಷ್ಕರ ನಡೆದಿದ್ದರೆ, ನಾಲ್ಕನೇ ಶನಿವಾರ ಮತ್ತು ಭಾನುವಾರದ ರಜೆಯ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಹಲವು ದಿನಗಳ ವ್ಯತ್ಯಯ ಉಂಟಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಸೆ.27ರ ಭಾನುವಾರವೂ ಸಾರ್ವಜನಿಕ ಮತ್ತು ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಈಗ ಮುಷ್ಕರ ಮುಂದೂಡಿಕೆಯಾಗಿರುವುದರಿಂದ ಗ್ರಾಹಕರು ಇಂದು ಸಾಮಾನ್ಯವಾಗಿ ಬ್ಯಾಂಕ್‌ ಶಾಖೆಗಳಿಗೆ ತೆರಳಿ ತಮ್ಮ ಅಗತ್ಯ ಬ್ಯಾಂಕಿಂಗ್ ಕೆಲಸಗಳನ್ನು ಮಾಡಿಕೊಳ್ಳಬಹುದು.

ಮುಷ್ಕರದ ಕಾರಣಗಳು ಏನಿತ್ತು..? :   ಭಾರತದಲ್ಲಿ ಬ್ಯಾಂಕ್ ನೌಕರರ ಒಕ್ಕೂಟಗಳು (ಮುಖ್ಯವಾಗಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ – UFBU) ಮುಷ್ಕರಕ್ಕೆ ಹೇಳಿದ ಪ್ರಮುಖ ಕಾರಣಗಳು ಮತ್ತು ಬೇಡಿಕೆಗಳು ಹೀಗಿತ್ತು…

  • ವಾರದಲ್ಲಿ 5 ದಿನಗಳ ಕೆಲಸದ ಅವಧಿ : ಇದು ಬ್ಯಾಂಕ್ ನೌಕರರ ಪ್ರಮುಖ ಮತ್ತು ದೀರ್ಘಕಾಲದ ಬೇಡಿಕೆಯಾಗಿದೆ. ಸದ್ಯ ಬ್ಯಾಂಕುಗಳಿಗೆ ತಿಂಗಳ 2ನೇ ಮತ್ತು 4ನೇ ಶನಿವಾರ ಮಾತ್ರ ರಜೆ ಇರುತ್ತದೆ. ಕೇಂದ್ರ ಸರ್ಕಾರ, ಆರ್‌ಬಿಐ ಮತ್ತು ವಿಮಾ ವಲಯದ ಮಾದರಿಯಲ್ಲಿ ಬ್ಯಾಂಕುಗಳಿಗೂ ಎಲ್ಲಾ ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂಬುದು ಇವರ ಮುಖ್ಯ ಒತ್ತಾಯವಾಗಿತ್ತು.
  • ಪಿಎಲ್‌ಐ (PLI) ಯೋಜನೆಯಲ್ಲಿನ ತಾರತಮ್ಯ ವಿರೋಧ: ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಕ (Performance Linked Incentive – PLI) ಯೋಜನೆಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಕೆಳಹಂತದ ಸಿಬ್ಬಂದಿಗಳ ನಡುವೆ ಇರುವ ತಾರತಮ್ಯವನ್ನು ನೌಕರರು ವಿರೋಧಿಸಿದ್ದರು. ಈ ಯೋಜನೆಯು ಎಲ್ಲರಿಗೂ ಸಮಾನವಾಗಿ ಅನ್ವಯವಾಗಬೇಕು ಎಂಬ ಒತ್ತಾಯ.
  • ಪಿಂಚಣಿ ಪರಿಷ್ಕರಣೆ (Pension Updation): ನಿವೃತ್ತ ಬ್ಯಾಂಕ್ ನೌಕರರ ಪಿಂಚಣಿಯನ್ನು ಪ್ರಸ್ತುತ ವೇತನ ಶ್ರೇಣಿಗೆ ತಕ್ಕಂತೆ ಪರಿಷ್ಕರಿಸಬೇಕು ಮತ್ತು ಎಲ್ಲ ಪಿಂಚಣಿದಾರರಿಗೂ ಸಮಾನವಾದ ತುಟ್ಟಿಭತ್ಯೆ (DA) ಸೂತ್ರವನ್ನು ಜಾರಿಗೊಳಿಸಬೇಕು.
  • ಹಳೇ ಪಿಂಚಣಿ ಯೋಜನೆ (OPS) ಮರುಜಾರಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ವ್ಯಾಪ್ತಿಯಲ್ಲಿರುವ ನೌಕರರಿಗೆ ಮತ್ತೊಮ್ಮೆ ಹಳೆಯ ಪಿಂಚಣಿ ಯೋಜನೆಗೆ (Old Pension Scheme) ಮರಳಲು ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹ
  • ಸಿಬ್ಬಂದಿ ಕೊರತೆ ಮತ್ತು ನೇಮಕಾತಿ: ಬ್ಯಾಂಕುಗಳಲ್ಲಿ ಹೆಚ್ಚುತ್ತಿರುವ ಕೆಲಸದ ಒತ್ತಡಕ್ಕೆ ತಕ್ಕಂತೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಮತ್ತು ತಾತ್ಕಾಲಿಕ ಸಿಬ್ಬಂದಿಗಳನ್ನು ಕಾಯಂಗೊಳಿಸಬೇಕು.
  • ಖಾಸಗೀಕರಣಕ್ಕೆ ವಿರೋಧ: ಸರ್ಕಾರಿ ಸ್ವಾಮ್ಯದ (ಸಾರ್ವಜನಿಕ ವಲಯದ) ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ನೀತಿಗಳು ಮತ್ತು ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ವಿರೋಧ.

ಸೆಪ್ಟೆಂಬರ್ 27 ರ ರಾತ್ರಿ ನಡೆದ ಮಾತುಕತೆಯಲ್ಲಿ 5 ದಿನಗಳ ಬ್ಯಾಂಕಿಂಗ್ ಸೇರಿದಂತೆ ಬಾಕಿ ಬೇಡಿಕೆಗಳ ಕುರಿತು ಉನ್ನತ ಮಟ್ಟದ ಸಮಿತಿ ಮೂಲಕ ಚರ್ಚೆ ಮುಂದುವರಿಸಲು ಒಪ್ಪಂದ ರೂಪುಗೊಂಡ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲಾಗಿದೆ

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The three-day nationwide bank strike scheduled from September 28 to 30 has been deferred at the last minute following talks between the Indian Banks’ Association and bank unions. The decision came after agreement to form a high-level committee to examine the long-standing demand for a five-day banking week, allowing bank branches to function normally on September 28.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror