Advertisement
MIRROR FOCUS

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

Share

ತಾಪಮಾನ ಏರಿಕೆಯಿಂದ ಉಂಟಾಗಿರುವ ಬಿಸಿಯನ್ನು ತಣ್ಣಗಾಗಿಸಲು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮಂಜುಗಡ್ಡೆ ಮಾದರಿಯ ಆಹಾರ ಪದಾರ್ಥಗಳನ್ನು ಪ್ರಾಣಿಗಳಿಗೆ  ನೀಡಲಾಗುತ್ತಿದ್ದು,  ತಂಪಾದ ವಾತಾವರಣ ಕಲ್ಪಿಸಲಾಗಿದೆ. ಇದೊಂದು ವಿನೂತನ ಪ್ರಯತ್ನವಾಗಿದ್ದು ಗಮನ ಸೆಳೆಯುತ್ತಿದೆ.

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ ಪ್ರಾಣಿಗಳಿಗೆ ತಂಪಾದ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ತಂಪಾದ ಆಹಾರ ಪದಾರ್ಥಗಳನ್ನು ನೀಡುತ್ತಿದ್ದಾರೆ. ಮೃಗಾಲಯದಲ್ಲಿರುವ ಕರಡಿ, ಹಿಪ್ಪೊಪೋಟಮಸ್, ಆನೆ, ಜಿರಾಫೆ, ಜೀಬ್ರಾ, ಕೋತಿ ಸೇರಿದಂತೆ ಇತರೆ ಸಸ್ಯಾಹಾರಿ ಪ್ರಾಣಿಗಳಿಗೆ ವಿಶೇಷ ಆಹಾರ ತಿನಿಸುಗಳನ್ನು ನೀಡಲಾಗುತ್ತಿದೆ.  ತಂಪಾದ  ಆಹಾರ ಪದಾರ್ಥಗಳನ್ನು ತಿನ್ನುತ್ತಿರುವ ಪ್ರಾಣಿಗಳ ದೃಶ್ಯ ಸಹಸ್ರಾರು ಪ್ರಾಣಿ ಪ್ರಿಯರಿಗೆ ಮುದ ನೀಡುತ್ತಿದೆ. ಇನ್ನೂ ಕೆಲವು ಪ್ರಾಣಿಗಳು ತಂಗಿರುವ ಸ್ಥಳದಲ್ಲಿ  ತಣ್ಣನೆಯ ನೀರನ್ನು ಸಿಂಪಡಣೆ ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಆನೆ, ಹುಲಿ, ಚಿರತೆ, ಸಿಂಹ ಸೇರಿದಂತೆ ಇತರೆ ಪ್ರಾಣಿಗಳಿಗೆ ನೀರಿನ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ.

ಪ್ರಾಣಿಗಳು ಬೇಸಿಗೆಯ ತಾಪಮಾನಕ್ಕೆ ಹೈರಾಣರಾಗುತ್ತಿರುವ ಹಿನ್ನೆಲೆಯಲ್ಲಿ  ಮಂಜುಗಡ್ಡೆ ಮಾದರಿಯ ಆಹಾರ ಹಾಗೂ ಸ್ಪ್ರಿಂಕ್ಲರ್ ವ್ಯವಸ್ಥೆ ಮಾಡಲಾಗಿದೆ.  ಈ ಬಾರಿಯೂ ಜಿರಾಫೆ, ಆನೆಯಂತಹ ದೊಡ್ಡ ಪ್ರಾಣಿಗಳ ಮೇಲೆ  ತಣ್ಣನೆಯ ನೀರನ್ನು ಸಿಂಪಡಿಸುವ  ವ್ಯವಸ್ಥೆ ಮಾಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಹೇಳುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

1 hour ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

2 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

15 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

15 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

1 day ago