ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |

October 21, 2024
10:02 AM

 ಯಕ್ಷಗಾನದ  ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

Advertisement
Advertisement

ಬಂಟ್ವಾಳದಲ್ಲಿ 1957 ರಲ್ಲಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಅವರು ಪಡೆದಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group