ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಬಂಟ್ವಾಳದಲ್ಲಿ 1957 ರಲ್ಲಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಅವರು ಪಡೆದಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…