ಸುಳ್ಯದ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಇಂದು ದೊಡ್ಡ ಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿ ಸರ್ಕಾರದ ಒಂದು ವರ್ಷ ಸಾಧನಾ ಸಮಾವೇಶವನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ತಡರಾತ್ರಿ 12:15 ಕ್ಕೆ ತುರ್ತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಗುರುವಾರ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು. ಜನೋತ್ಸವ ಕಾರ್ಯಕ್ರಮ ಜನರಿಗಾಗಿ ಆಯೋಜನೆ ಮಾಡಲಾಗಿದೆ, ಅದು ಸಂಭ್ರಮಕ್ಕಾಗಿ ಅಲ್ಲ. ಭರವಸೆಯ ಕಾರ್ಯಕ್ರಮ ಅದು. ಮುಂದೆ ಜನಪರವಾದ ಕೆಲಸ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕರ್ತನ ಹತ್ಯೆಯ ಸಮಯದಲ್ಲಿ ಕಾರ್ಯಕ್ರಮ ನಡೆಸಲು ಮನಸ್ಸಾಗುತ್ತಿಲ್ಲ ಎಂದರು.
ಬೆಳ್ಳಾರೆಯ ಪ್ರವೀಣ್ ಹತ್ಯೆಯ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುತ್ತದೆ. ಆರೋಪಿಗಳಿಗೆ ಕಠಿನ ಶಿಕ್ಷೆ ವಿಧಿಸಲಾಗುತ್ತದೆ ಎಂದರು.
ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ ಹತ್ಯೆ ಹಿನ್ನೆಲೆ | ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮ ರದ್ದು.ಅಭಿವೃದ್ಧಿ ನಿರಂತರವಾಗಿ ನಡೆಯುವುದು.ನಾಳೆ ಯಾವುದೇ ಕಾರ್ಯಕ್ರಮಗಳು ಇಲ್ಲ. ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ.| ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ| #PraveenNettaru
— theruralmirror (@ruralmirror) July 27, 2022