ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಕಲಚೇತನರಿಗೆ 5 ಲಕ್ಷ ರೂವರೆಗೆ ವಿಶೇಷ ವಿಮೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಂತ ವಿಶ್ವ ವಿಕಲಚೇತನ ಕಾರ್ಯಕ್ರಮದಲ್ಲಿ ಭಾಗಿಯಾದಂತ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ವಿಕಲ ಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದರು. ವಿಕಲಚೇತನರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ ವರೆಗೆ ವಿಶೇಷ ಆರೋಗ್ಯ ವಿಮೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿಕಲಚೇತನರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ"