ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…