ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ನಲ್ಲಿ ಅಭಿವೃದ್ಧಿ ಪರವಾದ ಘೋಷಣೆಗಳು ಹಾಗೂ ಕೆಲವು ಜನಪ್ರಿಯ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ. ಆದಷ್ಟೂ ತೆರಿಗೆ ಹೊರೆರಹಿತ ಬಜೆಟ್ ಮಂಡನೆಗಾಗಿ ಮುಖ್ಯಮಂತ್ರಿ ಕಸರತ್ತು ನಿರತರಾಗಿದ್ದರೆ. ಅದಕ್ಕೆ ಬೇಕಾಗುವ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ಚರ್ಚೆಯಾಗಿದೆ.ಕರ್ನಾಟಕ ಬಜೆಟ್‌ನ ಗಾತ್ರ 2.50 ಲಕ್ಷ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ.
ಈ ಬಾರಿ ವಿವಿಧ ಇಲಾಖೆಗಳ ಬೇಡಿಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಚುನಾವಣೆ ವರ್ಷ ಆದ ಕಾರಣ ಆಡಳಿತಾರೂಢ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ದೊಡ್ಡ ಮೊತ್ತದ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದೆಲ್ಲವನ್ನೂ ಸರಿದೂಗಿಸಲು ಮುಖ್ಯಮಂತ್ರಿ ಬೊಮ್ಮಾಯಿ ಶ್ರಮಿಸುತ್ತಿದ್ದಾರೆ.ಜೊತೆಗೆ ಬಜೆಟ್‌ನಲ್ಲಿ ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel