ರಾಜ್ಯದಲ್ಲಿ ಒಣ ಮೆಣಸಿನಕಾಯಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿವೆ. ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490