Advertisement
MIRROR FOCUS

ಭಾರತದಲ್ಲಿ ನಿರ್ಮಾಣವಾದ ವಿದ್ಯುತ್  ಚಾಲಿತ  ವಾಹನಗಳು 100 ದೇಶಗಳಿಗೆ ರಫ್ತು

Share

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನಾ  ಘಟಕಕ್ಕೆ  ಚಾಲನೆ ನೀಡಿದರು.  ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ  ಪ್ರಧಾನಿ, ಮೇಕ್ ಇನ್ ಇಂಡಿಯಾ ಪಯಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗಿದೆ.  ಭಾರತದಲ್ಲಿ ನಿರ್ಮಾಣವಾಗಿರುವ   ವಿದ್ಯುತ್  ಚಾಲಿತ  ವಾಹನಗಳು  100 ದೇಶಗಳಿಗೆ ರಫ್ತಾಗಲಿವೆ. ಜಾಗತಿಕ ಮಾರುಕಟ್ಟೆಗೆ ಭಾರತದ ವಾಹನಗಳು  ಪ್ರವೇಶಿಸಲಿದ್ದು,  ಹಸಿರು ಇಂಧನ  ವಲಯಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು. ಭಾರತ , ಜಪಾನ್  ನಡುವಿನ  ವ್ಯಾಪಾರ, ಸದೃಢವಾಗಿದ್ದು, ಈ  ಸ್ನೇಹ ಸಂಬಂಧಕ್ಕೆ  ಹೊಸ ಆಯಾಮ ದೊರೆತಿದೆ.  ಭಾರತದ ಬಳಿ ಪ್ರಜಾಪ್ರಭುತ್ವದ ಶಕ್ತಿ , ಭೌಗೋಳಿಕ  ಅನುಕೂಲ, ಕೌಶಲ್ಯಯುತ ಕಾರ್ಮಿಕರ  ಸಂಪನ್ಮೂಲವಿದ್ದು,  ಇದನ್ನು ಸದ್ಬಳಕೆ ಮಾಡಿಕೊಳ್ಳುವುದು  ಆಶಯವಾಗಿದೆ ಎಂದರು.  ಮುಂಬರುವ ದಿನಗಳಲ್ಲಿ ಭಾರತ ಶುದ್ಧ ಇಂಧನ ಹಾಗೂ ಶುದ್ಧ ಸಂಚಾರದ ವಿಶ್ವಾಸಾರ್ಹ ಕೇಂದ್ರವಾಗಲಿದೆ .  ಮೇಕ್ ಇನ್ ಇಂಡಿಯಾ ಅಭಿಯಾನದ ಮೂಲಕ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಕೈಗಾರಿಕಾ ಕಾರಿಡಾರ್ ಹಾಗೂ ಉತ್ಪಾದನಾ ಪಾರ್ಕ್ ಗಳನ್ನು ನಿರ್ಮಿಸಲಾಗುತ್ತಿದೆ. ಹಲವು ವಲಯಗಳಿಗೆ ಉತ್ಪಾದನಾ ಆಧಾರಿತ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರಸಕ್ತ ದಶಕದಲ್ಲಿ ದೇಶದ ಎಲೆಕ್ಟ್ರಾನಿಕ್ಸ್ ವಲಯದ ಉತ್ಪಾದನೆ ಶೇಕಡ 500ರಷ್ಟು ಹೆಚ್ಚಳವಾಗಿದೆ. ಮೊಬೈಲ್ ಫೋನ್ ಗಳ ಉತ್ಪಾದನೆ ಶೇಕಡ 2,700ರಷ್ಟು ಹಾಗೂ ರಕ್ಷಣಾ ವಲಯದ ಉತ್ಪಾದನೆ ಶೇಕಡ 200ಕ್ಕಿಂತ ಏರಿಕೆಯಾಗಿದೆ ಎಂದು ತಿಳಿಸಿದರು. ಉತ್ಪಾದನೆ ಸಂಬಂಧಿಸಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಸುಧಾರಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯಕರ ಸ್ಪರ್ಧೆ ಏರ್ಪಟ್ಟಿದೆ. ಪರಿಣಾಮವಾಗಿ ದೇಶಕ್ಕೆ ಲಾಭವಾಗುತ್ತಿದೆ. ಆಡಳಿತಾತ್ಮಕ ಹಾಗೂ ನೀತಿಗಳಲ್ಲಿ ಸುಧಾರಣೆ ಕೈಗೊಂಡಾಗ ಹೂಡಿಕೆದಾರರ ವಿಶ್ವಾಸ ಹೆಚ್ಚಳವಾಗುತ್ತದೆ. ಭವಿಷ್ಯದ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು ದೇಶದ ಮುಂದಿನ ಆದ್ಯತೆಯಾಗಿದೆ. ದೇಶದಲ್ಲೇ ಉತ್ಪಾದನೆಯಾಗುವ ವಸ್ತುಗಳನ್ನು ಬಳಕೆ ಮಾಡುವುದು ನಮ್ಮ ಜೀವನದ ಧ್ಯೇಯವಾಗಬೇಕು ಎಂದು ಕರೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

14 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

17 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

21 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago