ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಡಿಶಾದ ಜಗನ್ನಾಥ ದೇವಸ್ಥಾನದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಗನ್ನಾಥ ಪುರಿಯ ಈ ಐತಿಹಾಸಿಕ ದೇವಾಲಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ನಿಯೋಜನೆ, ಹಸಿರು ಶಕ್ತಿಗೆ ಕೇಂದ್ರ ಸರ್ಕಾರ ತೋರುತ್ತಿರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಪ್ರತಿಪಾದಿಸಿದರು. ಭಾರತ, ಪರಿಸರ ಸ್ನೇಹಿ ಸಾರಿಗೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಯೋಜನೆಗಳನ್ನು ಬೆಂಬಲಿಸುತ್ತದೆ. ಇದು ರಾಷ್ಟ್ರದ ಹಸಿರು ಮಿಷನ್ ಬಲವರ್ಧನೆಗೆ ಅಚಲವಾದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel