ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.