Advertisement
MIRROR FOCUS

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಿರಿ | ಅಧಿಕಾರಿಗಳಿಗೆ ದ ಕ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Share

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್‍ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3 ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.

Health and District In-charge Minister Dinesh Gundurao has instructed to the officials, to make necessary arrangements and be ready, people do not face any drinking water problem in summer.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

12 minutes ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

24 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago