ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಸ್ವಯಂಪ್ರೇರಿತ ದೂರು ದಾಖಲು

May 15, 2023
11:37 AM

 ಮೇ 13 ಮತ ಎಣಿಕೆ ದಿನದಂದು ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ  ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆ ಸಿಪಿಐ ದಯಾನಂದ ಶೇಗುಣಸಿ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರಡಿ ಪ್ರಕರಣ ದಾಖಲಾಗಿದ್ದು, “ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರು ಘೋಷಣೆ” ಕೂಗಿದ್ದಾರೆಂದು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಕಾಂಗ್ರೆಸ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕ್​ ಪರ ಘೋಷಣೆ

ಶನಿವಾರ (ಮೇ.13) ರಂದು ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ 2.30ರ ಸುಮಾರಿಗೆ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದ್ದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

 

ವೈರಲ್ ಆದ ವಿಡಿಯೋ ಫೇಕ್ ಎಂದಿದ್ದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್

ಈ ಬಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್ ನಿನ್ನೆ (ಮೇ.14) ರಂದು ಬೆಳಗಾವಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ “ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದ್ದರು.·

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror