Advertisement
ಸುದ್ದಿಗಳು

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

Share

ಜೂನ್ ತಿಂಗಳಲ್ಲಿ ಎದುರಾಗಿದ್ದ ಮಳೆ ಕೊರತೆಯ ಆತಂಕದಿಂದ ಕಂಗೆಟ್ಟಿದ್ದ ಬೆಳಗಾವಿ ಜಿಲ್ಲೆಯ ರೈತರಿಗೆ ಜುಲೈ ತಿಂಗಳ ಮಳೆ ಕೊಂಚ ನೆಮ್ಮದಿ ತಂದಿದೆ. ಜುಲೈನಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಮುಂಗಾರು ತಡವಾಗಿ ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.29ರಷ್ಟು ಕಡಿಮೆ ಮಳೆಯಾಗಿತ್ತು. ಇದರಿಂದ ಹಲವು ಪ್ರದೇಶಗಳಲ್ಲಿ ನದಿಗಳು ಹಾಗೂ ಜಲಾಶಯಗಳ ನೀರಿನ ಮಟ್ಟವೂ ಕುಸಿದಿತ್ತು. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೂ ಆತಂಕ ಎದುರಾಗಿತ್ತು.

ದೂರದರ್ಶನ ವರದಿಯಂತೆ ಆದರೆ ಜುಲೈನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಬದಲಾವಣೆ ಕಂಡುಬಂದಿದೆ. ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ರೈತರು ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯ ವಿವಿಧ ಭಾಗಗಳಲ್ಲಿ ಜೋಳ, ಮೆಕ್ಕೆಜೋಳ, ತಂಬಾಕು, ಕೆಂಪು ಹುರುಳಿ ಹಾಗೂ ತರಕಾರಿ ಬೆಳೆಗಳ ಕೃಷಿ ಚಟುವಟಿಕೆಗಳು ನಡೆಯುತ್ತಿವೆ.

ಮುಂಗಾರು ತಡವಾಗಿ ಪ್ರವೇಶಿಸಿದರೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ರೈತ ಮಹಾಂತೇಶ ಈರಣ್ಣವರ ಹೇಳುತ್ತಾರೆ.

ತಮ್ಮ ಜಮೀನಿನಲ್ಲಿ ತಂಬಾಕು, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತಿದ್ದು, ಉತ್ತಮ ಮಳೆಯಿಂದ ರೈತರಲ್ಲಿ ಹರ್ಷ ಮೂಡಿದೆ ಎಂದು  ರೈತ ರಾಜಕುಮಾರ ಲಕ್ಷ್ಮಣ ಬಾಳಪ್ಪಗೋಳ ಹೇಳುತ್ತಾರೆ.

ಜೂನ್‌ನ ಮಳೆ ಕೊರತೆಯಿಂದ ಆತಂಕದಲ್ಲಿದ್ದ ರೈತರಿಗೆ ಜುಲೈ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದೆ. ಮುಂದಿನ ದಿನಗಳಲ್ಲಿಯೂ ಮಳೆ ಪ್ರಮಾಣ ಉತ್ತಮವಾಗಿದ್ದರೆ ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಅನುಕೂಲವಾಗುವ ನಿರೀಕ್ಷೆ ಇದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Belagavi district has seen relief from the rainfall deficit recorded in June, with better-than-normal rainfall in July bringing renewed momentum to agricultural activities. Farmers are now actively cultivating crops such as maize, jowar, tobacco, red gram and vegetables. The improved rainfall has also lifted the mood among farmers who had faced concerns over delayed monsoon conditions and depleted water resources.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago