ರಾಜ್ಯದಲ್ಲಿ 50 ಗ್ರಾಮಪಂಚಾಯತ್ ಗಳು ಮತ್ತು ಪಟ್ಟಣ ಪಂಚಾಯತ್ ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ವಿಧಾನಸಭೆಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್ ಕೇಶವ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅವರು, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ ನಮಗೂ ವಿಶೇಷವಾದ ಪ್ರೀತಿ ಇದೆ. ಆದರೆ ರಾಜ್ಯದಲ್ಲಿ ಗ್ರಾಮ ಪಂಚಾಯತ್‌ನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ರಾಜ್ಯಾದ್ಯಂತ ಒಂದೇ ಮಾನದಂಡವಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಗ್ರಾಮ ಪಂಚಾಯತ್ ಅನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೊದಲ ಆದ್ಯತೆಯಲ್ಲೇ ಮೇಲ್ದರ್ಜೆಗೇರಿಸಲು ಗಮನ ಕೊಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಬಿಜೆಪಿ ಶಾಸಕ ಸುನೀಲ್‌ಕುಮಾರ್ ಮಾತನಾಡಿ, ಪ್ರವಾಸಿಗರು ಹೆಚ್ಚು ಆಗಮಿಸುವ ಪ್ರವಾಸಿ ತಾಣಗಳನ್ನು ಮೇಲ್ದರ್ಜೆಗೇರಿಸಲು ಮೊದಲ ಆದ್ಯತೆ ನೀಡಿ ಪರಿಗಣಿಸಿದರೆ ಸರ್ಕಾರಕ್ಕೂ ಗೌರವ ಬರುತ್ತದೆ ಎಂದರು.
ಬಿಜೆಪಿ ಶಾಸಕರಾದ ಪ್ರಭು ಚವ್ಹಾಣ್, ಭೈರತಿ ಬಸವರಾಜ್ ಮೊದಲಾದವರು ಧ್ವನಿಗೂಡಿಸಿ ಮಾತನಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 144.75 ಕೋಟಿ ರೂ. ಮೊತ್ತದಲ್ಲಿ ಶೀತಲಗೃಹ ಮತ್ತು ಇನ್ನಿತರ ಮೂಲಸೌಕರ್ಯ ಕಾರ್ಯಗಳನ್ನು ಕೈಗೊಳ್ಳಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನ RIDF-30 ಯೋಜನೆಯಡಿ 254 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡುವಂತೆ ಕಳೆದ ಮೇ 18ರಂದು ಕೋರಲಾಗಿತ್ತು. ಆಗಸ್ಟ 8ರಂದು ಆರ್ಥಿಕ ಇಲಾಖೆ 144. 75 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿರುತ್ತದೆ ಎಂದರು.
ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಿದ್ದುಪಡಿ ತಂದ ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿ ಬರುತ್ತಿವೆ. ರೈತರ ಬೆಳೆಗೆ ಯೋಗ್ಯ ದರ ಹಾಗೂ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೀತಲ ಗೃಹಗಳನ್ನು ಸ್ಥಾಪಿಸಲು ಮತ್ತು ಹೆಚ್ಚು ಮೂಲಸೌಲಭ್ಯ ಕಲ್ಪಿಸಲು ಸಚಿವರು ಹಾಗೂ ಶಾಸಕರಿಂದ ಕೋರಿಕೆಗಳು ಸ್ವೀಕೃತವಾಗಿವೆ. ಈ ಹಿನ್ನಲೆಯಲ್ಲಿ 2024-25ನೇ ಸಾಲಿನ RIDF-30 ಯೋಜನೆಯಡಿ 374.75 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆಯನ್ನು ಕೋರಲಾಗಿದೆ ಎಂದು ಹೇಳಿದರು.
ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ…
ತೀರಾ ಬಡವರಿಗೆ, ಆದಾಯ ತರುವ ವ್ಯಕ್ತಿಗಳಿಲ್ಲದ ಮನೆಯವರಿಗೆ, ತಾಯಿ ಮಕ್ಕಳು ಮಾತ್ರ ಇರುವ…
18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ…
ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನದ ಮೂಲಕ ಆರಂಭಿಸಿದ ಗಾರ್ಮೆಂಟ್…
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ…
17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ…