ಅಯೋಧ್ಯೆ ರಾಮಮಂದಿರಕ್ಕೆ ರಾಜ್ಯದಿಂದ ಘಂಟೆ, ಪೂಜಾ ಸಾಮಾಗ್ರಿ | ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ |

December 16, 2023
12:33 PM
ಅಯೋಧ್ಯೆಗೆ ರಾಜ್ಯದಿಂದಲೂ ಸೇವೆಗಳು ನಡೆಯುತ್ತಿದೆ. ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

ದೇಶದಾದ್ಯಂತ ಶಬರಿ ರಾಮನ ಬರುವಿಕೆಗಾಗಿ ಕಾಯುತ್ತಿದ್ದಂತೆ ದೇಶದ ಜನತೆ ರಾಮಮಮಂದಿರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ(Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆಗಳು ಆಯೋಜನೆಗೊಂಡಿದೆ. ಎಲ್ಲೆಲ್ಲೂ ಸಂಭ್ರಮ, ರಾಮ ಮಂದಿರಕ್ಕಾಗಿ ಕೊಡುಗೆಗಳು, ಸೇವೆಗಳು ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. ಅಲ್ಲದೆ ಕನ್ನಡದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ.

Advertisement

ಕರ್ನಾಟಕದಿಂದ ಸೇವೆ: ಅಯೋಧ್ಯೆಗೆ ರಾಜ್ಯದಿಂದ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ರಿಷಬ್‌ ಶೆಟ್ಟಿ: ಅಯೋಧ್ಯಯ ರಾಮಮಂದಿರ  ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

On January 22, Ayodhya Ram Mandir will be dedicated to the people, and a program of Puja Punaskara has been planned in the villages. Everywhere there is celebration, offerings and services for Ram Mandir. As part of this, Banashankari of Bengaluru has dedicated the bell to the Rama Mandir of Ayodhya in the first phase. Also, it is a very happy thing that famous Kannada actor and director Rishabh Shetty has been invited to the inauguration of Ram Mandir.

– ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group