ದೇಶದಾದ್ಯಂತ ಶಬರಿ ರಾಮನ ಬರುವಿಕೆಗಾಗಿ ಕಾಯುತ್ತಿದ್ದಂತೆ ದೇಶದ ಜನತೆ ರಾಮಮಮಂದಿರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ(Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆಗಳು ಆಯೋಜನೆಗೊಂಡಿದೆ. ಎಲ್ಲೆಲ್ಲೂ ಸಂಭ್ರಮ, ರಾಮ ಮಂದಿರಕ್ಕಾಗಿ ಕೊಡುಗೆಗಳು, ಸೇವೆಗಳು ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. ಅಲ್ಲದೆ ಕನ್ನಡದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ.