ಬೆಳ್ಳಾರೆ | ಉಚಿತ ಆರೋಗ್ಯ ತಪಾಸಣೆ ಶಿಬಿರ| ಭೂಮಿ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ |

June 12, 2022
7:12 PM

 ಆರೋಗ್ಯ ತಪಾಸಣೆ ಉಚಿತ ಶಿಬಿರ, ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ಹಾಗೂ ಭೂಮಿ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆಯಲ್ಲಿ ಭಾನುವಾರ ನಡೆಯಿತು.

ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸೇವಾ ಪ್ರಮುಖರಾದ ನಾ.ಸೀತಾರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಗ್ರಾಮ ಸ್ವರಾಜ್ಯ ತಂಡದ ಆರ್.ಕೆ‌. ಭಟ್ ಕುರುಂಬುಡೇಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ , ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ|ಮುರಲಿಮೋಹನ ಚೂಂತಾರು, ಕುಂಬಾರರ ಗುಡಿ ಕೈಗಾರಿಕಾ ಸ.ಸಂಘ.ನಿ.ಪುತ್ತೂರು ಇದರ ಅಧ್ಯಕ್ಷರಾದ ಭಾಸ್ಕರ ಎಂ. ಪೆರುವಾಯಿ ಮೊದಲಾದವರಿದ್ದರು. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror