ಆರೋಗ್ಯ ತಪಾಸಣೆ ಉಚಿತ ಶಿಬಿರ, ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ಹಾಗೂ ಭೂಮಿ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆಯಲ್ಲಿ ಭಾನುವಾರ ನಡೆಯಿತು.
ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸೇವಾ ಪ್ರಮುಖರಾದ ನಾ.ಸೀತಾರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಗ್ರಾಮ ಸ್ವರಾಜ್ಯ ತಂಡದ ಆರ್.ಕೆ. ಭಟ್ ಕುರುಂಬುಡೇಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ , ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ|ಮುರಲಿಮೋಹನ ಚೂಂತಾರು, ಕುಂಬಾರರ ಗುಡಿ ಕೈಗಾರಿಕಾ ಸ.ಸಂಘ.ನಿ.ಪುತ್ತೂರು ಇದರ ಅಧ್ಯಕ್ಷರಾದ ಭಾಸ್ಕರ ಎಂ. ಪೆರುವಾಯಿ ಮೊದಲಾದವರಿದ್ದರು. ಉಪಸ್ಥಿತರಿದ್ದರು.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…