ಮತ್ತೆ ಉದ್ವಿಗ್ನಗೊಂಡ ಸುಳ್ಯ ತಾಲೂಕಿನ ಬೆಳ್ಳಾರೆ ಸದ್ಯ ತಿಳಿಯಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ಎಂಬವರಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಹೀಗಾಗಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡುವುದರ ಜೊತೆಗೆ ಯುವಕರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಇದೀಗ ಪೊಲೀಸರು ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿದೆ.
ಪ್ರವೀಣ್ ನೆಟ್ಟಾರ್(Praveen Nettar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರ ಸಫ್ರಿದ್ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು.
ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ರೈ ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಬೆದರಿಕೆ ಒಡ್ಡಿದ ಸಫ್ರೀದ್ ಎಂಬವರನ್ನು ಕೂಡಲೇ ವಿಚಾರಿಸಿ ಕ್ರಮ ಕೈಗೊಳಳುವ ಭರವಸೆ ನೀಡಿದ ಮೇರೆಗೆ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ತೆರಳಿದರು.
ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ತಕ್ಷಣವೇ ಈ ಬಗ್ಗೆ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…