Advertisement
ಸುದ್ದಿಗಳು

ಬೆಳ್ಳಾರೆ | ಪ್ರವೀಣ್‌ ಹತ್ಯೆ ಪ್ರಕರಣ | ಹಿಂದೂ ಕಾರ್ಯಕರ್ತರಿಂದ ಹೆಚ್ಚಿದ ಆಕ್ರೋಶ | ನಾಯಕರಿಗೆ ದಿಗ್ಭಂಧನ | ನ್ಯಾಯಕ್ಕಾಗಿ ಒತ್ತಾಯ |

Share

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಬೆಳ್ಳಾರೆ ತಲುಪಿದೆ. ಈ ಸಂದರ್ಭ ಹಿಂದೂ ಕಾರ್ಯಕರ್ತರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತಿಮ ದರ್ಶನಕ್ಕೆ ಆಗಮಿಸಿದ ಬಿಜೆಪಿ ನಾಯಕರು ಹಾಗೂ ಆರ್‌ ಎಸ್‌ ಎಸ್‌ ಮುಖಂಡರ ಕಾರನ್ನೂ ಕಾರ್ಯಕರ್ತರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಧಿಕ್ಕಾರ ಕೂಗಿದರು. ನಾಯಕರ ಕಾರನ್ನು ತಡೆದು ಗೋಬ್ಯಾಕ್‌ ಎಂದು ಕಾರನ್ನೇ ತಳ್ಳಿದರು.

ನಿನ್ನೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪುತ್ತಿದ್ದಂತೆ ಹಿಂದೂ ಪರ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತು. ನನ್ನದೇ ಸರ್ಕಾರ ಇದ್ದರೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರೂ ನಾಯಕರು ಸುಮ್ಮನೆ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವ ಅಂಗಾರ, ಸುನಿಲ್‌ ಕುಮಾರ್‌ ಕಟೀಲು, ಸಂಜೀವ ಮಠಂದೂರು, ಹರೀಶ್‌ ಪೂಂಜಾ ಮೊದಲಾದವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರೊಬ್ಬರು ಹರೀಶ್‌ ಪೂಂಜಾ ಅವರಲ್ಲಿ ದಕ ಜಿಲ್ಲೆಯಲ್ಲಿ ಸಮರ್ಥ ನಾಯಕರಲ್ಲ ನೀವೇ ಇದಕ್ಕೆ ಮುಂದಾಳುತ್ವ ವಹಿಸಿ ಎಂದೂ ಹೇಳಿದರು.

ಇದೇ ವೇಳೆ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದರು. ಇದೆಲ್ಲಾ ಡೋಂಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶವಯಾತ್ರೆ ಆಗಮಿಸುತ್ತಿದ್ದ ವೇಳೆ  ನಿಂತಿಕಲ್  ಮೆರವಣಿಗೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೊಬ್ಬನ ಬೈಕ್ ಪುಡಿಗಟ್ಟಲಾಗಿದೆ. ಬೆಳ್ಳಾರೆಯಲ್ಲಿ ಆಕ್ರೋಶ ಮಡುಗಟ್ಟಿದೆ. ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

14 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

19 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago